ಅಪ್ಪ ಅಂದ್ರೆ ಆಕಾಶ…: ನಾ’ನಲ್ಲ’
ಏಷ್ಟೋ ದಿನಗಳ ಹಿಂದೆ ಓದಬೇಕು ಅಂತ ತಂದಿದ್ದ ಪುಸ್ತಕವನ್ನು ಓದೋಕೆ ಇವತ್ತು ಸಮಯ ಕೂಡಿ ಬಂದಿತ್ತು. ಓದುತ್ತ ಹೋದಂತೆ ಒಂದಕ್ಕಿಂತ ಒಂದು ಲೇಖನಗಳು ಮನಸ್ಸಿನ ಆಳಕ್ಕೆ ಇಳಿಯತೊಡಗಿದವು. ಒಂದು ಲೇಖನದಲ್ಲಿ ಲೇಖಕರು ಹೇಳಿದಂತೆ "ಅಪ್ಪ ಅಂದ್ರೆ ಆಕಾಶ" ಎನ್ನುವುದು ಮನದಟ್ಟಾಗಲು ಬಹಳ ಸಮಯ ಬೇಕಾಗಲಿಲ್ಲ. ಹೌದು, ನಿಜವಾಗಲೂ ಅಪ್ಪ ಅಂದ್ರೆ ಆಕಾಶ. ನಾವು ಚಿಕ್ಕವರಿದ್ದಾಗ ಒಗಟುಗಳಿಗೆ ಉತ್ತರಿಸುವ ಪಂದ್ಯವಾಡುವಾಗ ಅನೇಕ ಬಾರಿ ಕೇಳಲ್ಪಟ್ಟ ಒಗಟೆಂದರೆ "ಅವ್ವನ ಸೀರೆ ಮಡಿಚೋಕಾಗಲ್ಲ, ಅಪ್ಪನ ರೊಕ್ಕ ಎನಿಸೊಕಾಗಲ್ಲ" ಅನ್ನೋದು. ಅದಕ್ಕೆ ಉತ್ತರ … Read more