ನಿಲ್ಲಿಸದಿರು ವನಮಾಲಿ ಕೊಳಲಗಾನವ..: ಅನುರಾಧ ಪಿ. ಸಾಮಗ
ಎಂದಿನಂಥದೇ ಒಂದು ಬೆಳಗು, ಸುಂದರ ಬೆಳಗು. ನಿನ್ನೆಯೊಡಲಿನೆಲ್ಲ ನೋವಿಗೂ ಮುಲಾಮಾಗಬಲ್ಲ ಮುದ್ದಿಸಿ ಎದ್ದೇಳಿಸುವ ಅಮ್ಮನ ನಗುಮುಖದಂಥ, ಅಪ್ಪನ ಮುಖದ ಆಶ್ವಾಸನೆಯಂಥ ಬೆಳ್ಳಂಬೆಳಗು. ಯಮುನೆ ಹರಿಯುತ್ತಿದ್ದಾಳೆ ಮಂಜುಳಗಮನೆಯಾಗಿ; ಒಡಲಲ್ಲಿ ಮಾತ್ರ ಅತ್ಯುತ್ಸುಕತೆಯ ಉಬ್ಬರ, ಅದೇ ಪರಿಚಿತ ಸುಖದ ಭಾವ. ಎಂದಾಗಿತ್ತೋ ಈ ಅನುಭವ! ತಕ್ಷಣಕ್ಕೆ ನೆನಪಾಗದು, ಹೆಣ್ಣೊಡಲಿನ ಭರತವಿಳಿತಗಳೆಲ್ಲವನ್ನೂ ಸುಮ್ಮಸುಮ್ಮನೆ ಹೊರಗೆಡಹಿ ಉಕ್ಕಿ ಹರಿಯಬಿಡಲಾದೀತೇ, ಜನ ಏನಂದಾರು? ಹಾಗಾಗಿ ತೋರಗೊಡದೆ ಹೊರಗವಳದು ಅದೇ ಗಂಭೀರ ಹರಿವು, ಆದರೂ ಒಳಗಿನ ಅಲೆಗಳ ಏರಿಳಿತವದೆಷ್ಟು ಹೊತ್ತು ಬಚ್ಚಿಡಬಲ್ಲಳೋ ಆಕೆಗೇ ಗೊತ್ತಿಲ್ಲ. ದಡದ … Read more