ವರದಾಮೂಲ: ಪ್ರಶಸ್ತಿ
ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಚಿತ್ರಗಳ ಮಾಹಿತಿ ಕಲೆಹಾಕಿ ಅದನ್ನು ವಿಕಿಪೀಡಿಯಾದಲ್ಲಿ ಎಲ್ಲರಿಗೂ ತಲುಪುವಂತೆ ದಾಖಲಿಸೋ ಒಂದು ಕಾರ್ಯಕ್ರಮ ವಿಕಿಪೀಡಿಯಾ ಫೋಟೋವಾಕ್.ಸಾಗರದಲ್ಲಿ ಈ ಕಾರ್ಯಕ್ರಮವನ್ನು ಮಾಡಬೇಕೆಂದುಕೊಂಡಾಗ ನಾವು ಅದನ್ನು ಶುರುಮಾಡಿದ್ದು ವರದಾಮೂಲದಿಂದ. ವರದಾಮೂಲವೆನ್ನೋ ಸ್ಥಳದ ಬಗ್ಗೆ ಸಾಗರದ ಸುತ್ತಮುತ್ತಲಿನವರಿಗೆ ಹೊಸದಾಗಿ ಹೇಳೋ ಅವಶ್ಯಕತೆಯಿಲ್ಲದಿದ್ದರೂ ಈ ಭಾರಿಯ ಭೇಟಿಯಲ್ಲಿ ಸಿಕ್ಕ ಒಂದಿಷ್ಟು ಆಸಕ್ತಿಕರ ಮಾಹಿತಿಯನ್ನು ಹಂಚಿಕೊಳ್ಳಲೇಬೇಕೆಂಬ ಹಂಬಲ ಹುಟ್ಟಿದ್ದು ಸಹಜ. ಅದರ ಫಲವೇ ಈ ಲೇಖನ. ಹೋಗೋದು ಹೇಗೆ ? ವರದಾಮೂಲಕ್ಕೆ ಸಾಗರದಿಂದ ೬ ಕಿ.ಮೀ. … Read more