ದಾರಿ ತೋರುವ ದುರಂತನಾಯಕ: ಚೈತ್ರಾ ಎಸ್.ಪಿ.
ಅವನೆಂದರೆ ಥಟ್ಟನೆ ನೆನಪಾಗುವುದು ಹೆಸರು ದುರಂತನಾಯಕ. ಮಹಾಕಾವ್ಯದ ದುರಂತನಾಯಕ. ಅಸಹಾಯಕ ಪರಿಸ್ಥಿತಿಯಲ್ಲಿ ಸಿಕ್ಕಿ ಒದ್ದಾಡಿದ ನತದೃಷ್ಟ.ಅವಮಾನಗಳಲ್ಲಿ ಬೆಂದು ಮಿಂದೆದ್ದವ. ತಿರಸ್ಕಾರಗಳನ್ನೆ ಕಂಡವ. ಹುಟ್ಟಿದಾಗ ತಾಯಿಗೆ ಬೇಡವಾದ. ಗುರುಕುಲದಲ್ಲಿ ಗುರುಗಳಿಗೆ ಬೇಡವಾದ.ಸ್ವಯಂವರದಲ್ಲಿ ಮೆಚ್ಚಿದ ಹುಡುಗಿಗೆ ಬೇಡವಾದ. ಹೇಗೆ ಬದುಕಿರಬಹುದು ತನ್ನ ಬಾಳನ್ನು ? ಬೇಸರದಲ್ಲೇ ? ಖಿನ್ನತೆಯಲ್ಲೇ ? ಕಂಡಿರದ ತಂದೆ-ತಾಯಿಗಾಗಿ ಹಂಬಲಿಸಿದನೇ ? ಮಾಡಿದ ತಪ್ಪಿಗಾಗಿ ಪರಿತಪಿಸಿದನೇ ? ಬೆರಳು ತೋರಿಸಿದರೆಂದು ಮರುಗಿದನೇ ? ಜನ್ಮದತ್ತವಾಗಿ ಐಶ್ವರ್ಯ, ಕ್ಷಾತ್ರಪಂಥದ ಹೆಗ್ಗುರುತಾದ ಎದೆಗವಚಗಳನ್ನು ಹೊತ್ತು ಬಂದರೂ ಸೂತಪುತ್ರನೆಂಬ ಹಣೆಪಟ್ಟಿಯಿಂದ ಕಂಗೆಟ್ಟನೆ … Read more