ನ್ಯಾನೋ ಕತೆಗಳು: ನವೀನ್ ಮಧುಗಿರಿ
ಪ್ರೇಮಿಗಳು ಇಬ್ಬರೂ ಮೌನವಾಗಿ ಕುಳಿತಿದ್ದರು. ಮುಂದೇನು ಮಾಡುವುದೆಂದು ಇಬ್ಬರಿಗೂ ತೋಚುತ್ತಿಲ್ಲ. ಜಾತಿಯ ನೆಪವೊಡ್ಡಿ ಎರಡೂ ಮನೆಯವರು ಪ್ರೇಮಿಗಳನ್ನು ದೂರ ಮಾಡಲು ಯತ್ನಿಸುತ್ತಿದ್ದರು. "ಮುಂದೇನು ಮಾಡುವುದು?" ಹುಡುಗಿ ಪ್ರಶ್ನಿಸಿದಳು. "ಗೊತ್ತಿಲ್ಲ, ಏನೊಂದು ತೋಚುತ್ತಿಲ್ಲ" ಹುಡುಗ ಉತ್ತರಿಸಿದ. "ಎಲ್ಲಾದರೂ ದೂರ ಹೋಗಿ ಜೊತೆಯಾಗಿ ಬದುಕೋಣ" "ಬದುಕು ಎರಡೂವರೆ ಗಂಟೆಯ ಸಿನಿಮಾವಲ್ಲ" "ಹಾಗಾದರೆ ನಾವು ಪ್ರೀತಿಸಿದ್ದಾದರೂ ಯಾಕೆ?" ಹುಡುಗಿಯ ಕಣ್ಣಲ್ಲಿ ನೀರು ತುಂಬಿತ್ತು. ಅವಳ ಕಣ್ಣಲ್ಲಿನ ನೋವು ಗುರುತಿಸಿದ. ಎದೆಗೆ ಕೊಳ್ಳಿಯಿಂದ ತಿವಿದಂತಾಯ್ತು, ನೋವಿನಿಂದಲೇ ನುಡಿದ "ಜೊತೆಯಾಗಿ ಬದುಕೋಣವೆಂದು, ಆದರೆ.." "ಆದರೆ … Read more